ಬೆಂಗಳೂರಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

Bengaluru--01

ಬೆಂಗಳೂರು, ಸೆ.17-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ನಗರದ ಬೀದಿ ವ್ಯಾಪಾರಿಗಳ ಸಮೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ. ದಾಸರಹಳ್ಳಿಯಲ್ಲಿ ಇಂದು ಬೃಹತ್ ಬೆಂಗಳೂರು ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ.ಸಿ ಸಮೀಕ್ಷೆಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಬೀದಿಬದಿಯಲ್ಲಿ ಹಾಗೂ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡುವರ ಗಣತಿ ನಡೆಸಿ ಸರ್ಕಾರದಿಂದ ಅವರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಈ ಸಮೀಕ್ಷೆ ನಡೆಸಲಾಗುತ್ತಿದ್ದು , ಅವರಿಗಾಗಿ ವಿವಿಧ ಯೋಜನೆಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ.ಇದನ್ನು ವ್ಯಾಪಾರಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಬಿಬಿಎಂಪಿಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಅಧಿಕಾರಿಗಳು ಇಂದಿನಿಂದ 198 ವಾರ್ಡ್‍ಗಳಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಆರಂಭಿಸಿದ್ದಾರೆ.

ಅಧಿಕಾರಿಗಳು ಖುದ್ದು ವ್ಯಾಪಾರ ಮಾಡುವ ಸ್ಥಳಗಳಿಗೆ ತೆರಳಿ ವ್ಯಾಪಾರಿಗಳ ವಿವರ ಪಡೆಯಲಿದ್ದಾರೆ. ವ್ಯಾಪಾರಿಗಳು ಎರಡು ಭಾವಚಿತ್ರಗಳು, ಕುಟುಂಬದ ಭಾವಚಿತ್ರ, ವೈಯಕ್ತಿಕ ವಿವರ ಹಾಗೂ ಆಧಾರ್ ಗುರುತಿನ ಚೀಟಿಯನ್ನು ಒದಗಿಸಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕೆಂದು ಒಕ್ಕೂಟದ ಅಧ್ಯಕ್ಷ ರಂಗನಾಥ್ ಸ್ವಾಮಿ ತಿಳಿಸಿದ್ದಾರೆ.   ನಾಳೆ ಬೊಮ್ಮನಹಳ್ಳಿಯಲ್ಲಿ ಈ ಸಮೀಕ್ಷೆ ಕಾರ್ಯ ನಡೆಯಲಿದ್ದು , ಸ್ಥಳೀಯ ಬೀದಿ ವ್ಯಾಪಾರಿಗಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಸರ್ಕಾರದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ನಗರದ ಎಲ್ಲಾ ವಾರ್ಡ್‍ಗಳಲ್ಲಿ ಅಯಾ ತಂಡ ಸಮೀಕ್ಷಾ ಕಾರ್ಯ ನಡೆಸಲಿವೆ.

Facebook Comments

Sri Raghav

Admin