ಮೂರು ಕರಡಿಗಳು ದಾಳಿ : ವ್ಯಕ್ತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ,ಸೆ.17-ಕೆಲಸಕ್ಕೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಏಕಕಾಲಕ್ಕೆ ಮೂರು ಕರಡಿಗಳು ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಸೈಫುಲ್ಲಾ ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಕಣ್ವಕುಪ್ಪೆ ಬಳಿ ಮೂರು ಕರಡಿಗಳು ಏಕಾಏಕಿ ಈತನ ಮೇಲೆದ ದಾಳಿ ನಡೆಸಿವೆ. ದಾಳಿಯಲ್ಲಿ ಸೈಫುಲ್ಲಾ ಗಂಭೀರ ಗಾಯಗೊಂಡಿದ್ದು , ಜಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin