ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೆಲ್ಫೀ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Selfie--01

ಮೈಸೂರು,ಸೆ.17-ಮೈಸೂರು ಸಮೀಪದಲ್ಲಿರುವ ಪ್ರಸಿದ್ದ ಚಾಮುಂಡಿ ಬೆಟ್ಟದಲ್ಲಿ ಸೆಲ್ಫಿ ನಿಷೇಧಿಸಲು ಉದ್ದೇಶಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾಡಳಿತ ವಿವ್ಯೂ ಪ್ಯಾಂಟ್ ನಿರ್ಮಾಣ ಮಾಡಲಾಗುತ್ತಿತ್ತು. ಈ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಪ್ರವಾಸಿಗರು ಈ ಸ್ಥಳಕ್ಕೆ ತೆರಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಲ್ಫಿಗೆ ನಿಷೇಧ ಹೇರಲು ಮುಂದಾಗಿದೆ.  ಚಾಮುಂಡಿ ಬೆಟ್ಟದಲ್ಲಿ ಎರಡು ಸ್ಥಳಗಳಲ್ಲಿ ವ್ಯೂಹ ನಿರ್ಮಿಸಲು ಕಾಮಗಾರಿ ನಡೆಯುತ್ತಿತ್ತು. ದಸರಾ ವೇಳೆಗೆ ಪೂರ್ಣಗೊಳ್ಳಲಿದೆ.

ಈ ಸಂದರ್ಭದಲ್ಲಿ ಕೆಲವು ಮಂದಿ ಸ್ಥಳಕ್ಕೆ ತೆರಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸ್ಥಳಕ್ಕೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸಿ ಸೆಲ್ಫಿ ತೆಗೆದುಕೊಳ್ಳದಂತೆ ಫಲಕವನ್ನು ಅಳವಡಿಸುವ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ.

Facebook Comments

Sri Raghav

Admin