ರಾಜಸ್ತಾನ ಬಿಜೆಪಿ ಸಂಸದ ಮಹಂತ ಚಾಂದ್‍ನಾಥ್ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

BJP-MP

ಜೈಪುರ್/ನವದೆಹಲಿ, ಸೆ.17-ರಾಜಸ್ತಾನದ ಅಲ್ವಾರ್ ಕ್ಷೇತ್ರದ ಬಿಜೆಪಿ ಸಂಸದ ಮಹಂತ ಚಾಂದ್‍ನಾಥ್(61) ಇಂದು ಬೆಳಗ್ಗೆ ನವದೆಹಲಿಯ ಆಸ್ಪತ್ರೆಯೊಂದರಲ್ಲಿ ನಿಧನರಾದರು.ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಚಾಂದ್‍ನಾಥ್ ಕೆಲಕಾಲದಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ರಾಜ್ಯ ಬಿಜೆಪಿ ವಕ್ತಾರ ಆನಂದ ಶರ್ಮಾ ತಿಳಿಸಿದ್ದಾರೆ.  2014 ಸಾರ್ವತ್ರಿಕ ಚುನಾವಣೆಯಲ್ಲಿ ಇವರು ಜಯಶೀಲರಾಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಮತ್ತು ಕೇಂದ್ರದ ಮಾಜಿ ಸಚಿವ ಜಿತೇಂದ್ರ ಸಿಂಗ್ ಅವರನ್ನು ಪರಾಭವಗೊಳಿಸಿದ್ದರು.

ಚಾಂದ್‍ನಾಥ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ವಸುಂಧರಾ ರಾಜೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook Comments

Sri Raghav

Admin