ಗೋವಾದಲ್ಲಿ`ಕಿಕ್’ ಬ್ಯಾನ್ : ಶಾಕ್ ನೀಡಿದ ಸಿಎಂ ಪರಿಕ್ಕರ್

ಈ ಸುದ್ದಿಯನ್ನು ಶೇರ್ ಮಾಡಿ

Untitled-2

ಪಣಜಿ,ಸೆ.18-ಪ್ರವಾಸಿಗರ ಸ್ವೇಚ್ಛಾಚಾರಕ್ಕೆ ಕುಖ್ಯಾತಿ ಪಡೆದಿರುವ ಗೋವಾದ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನಕ್ಕೆ ನಿಷೇಧ ಹೇರಲು ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ನಿರ್ಧರಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುವ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪರಿಕ್ಕರ್ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ರಾಜಧಾನಿ ಪಣಜಿ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪಾನ ನಿಷೇಧಕ್ಕೆ ಶೀಘ್ರದಲ್ಲೇ ಅಬಕಾರಿ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು. ಈ ಸಂಬಂಧ ಮುಂದಿನ ತಿಂಗಳ ಅಂತ್ಯದೊಳಗೆ ಅಧಿಸೂಚನೆ ಹೊರಡಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಪಾನಮತ್ತರಾಗಿ ಸಮುದ್ರಕ್ಕಿಳಿದು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳನ್ನು ಪರಿಗಣಿಸಿದ್ದ ಸರ್ಕಾರ ಮದ್ಯಪಾನ ಮಾಡಿ ನೀರಿಗಿಳಿಯುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸುವ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಬಹುದು.

Facebook Comments

Sri Raghav

Admin