ಮನೆ ಮನೆಗೆ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸುವಂತೆ ಪದಾಧಿಕಾರಿಗಳಿಗೆ ಪರಂ ತಾಕೀತು

ಈ ಸುದ್ದಿಯನ್ನು ಶೇರ್ ಮಾಡಿ

Parameshwar--01

ಬೆಂಗಳೂರು,ಸೆ.18-ಸೆಪ್ಟೆಂಬರ್ 23ರಿಂದ ಆರಂಭವಾಗಲಿರುವ ಮನೆ ಮನೆಗೆ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್‍ನ ಎಲ್ಲ ಪದಾಧಿಕಾರಿಗಳು ಭಾಗವಹಿಸುವಂತೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಾಕೀತು ಮಾಡಿದ್ದಾರೆ.  ಚುನಾವಣೆ ಸಿದ್ಧತೆಗಾಗಿ ನಿರಂತರ ತಾಲೀಮು ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕದ ಪದಾಧಿಕಾರಿಗಳ ಸಭೆ ನಡೆಸಲಾಯಿತು. 2018ರ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತರಬೇಕು ಎಂದು ಪಣ ತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಇಂದು ಸಭೆಯ ನೇತೃತ್ವ ವಹಿಸಿ ಮುಖಂಡರಿಗೆ ಮಾರ್ಗದರ್ಶನ ನೀಡಿದರು.

ಸೆ.23ರಿಂದ ಮನೆ ಮನೆಗೆ ಕಾಂಗ್ರೆಸ್ ಆಂದೋಲನವಿದೆ. ಇದರಲ್ಲಿ ಪಕ್ಷದ ಶಾಸಕರು, ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದವರು, ಕೆಪಿಸಿಸಿ ಉಸ್ತುವಾರಿ, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಇದರಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕೆಂದು ಸೂಚನೆ ನೀಡಿದರು. ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಕೇಂದ್ರ ಸರ್ಕಾರದ ವೈಫಲ್ಯಗಳ ಕುರಿತು ಮೊದಲ ಹಂತದಲ್ಲಿ 5 ಲಕ್ಷ ಕಿರುಹೊತ್ತಿಗೆಗಳನ್ನು ಪ್ರಕಟಿಸಲಾಗಿದೆ. ಇದನ್ನು ಜನರಿಗೆ ತಲುಪಿಸಬೇಕು ಎಂದರು.

ಬೂತ್ ಮಟ್ಟದ ಸಮಿತಿಗಳನ್ನು ಪೂರ್ಣ ಪ್ರಮಾಣದಲ್ಲಿ ರಚಿಸುವಂತೆ ಪರಮೇಶ್ವರ್ ಇದೇ ಸಂದರ್ಭದಲ್ಲಿ ತಾಕೀತು ಮಾಡಿದರು. ಈಗಾಗಲೇ ಶೇ.80ರಷ್ಟು ಸಮಿತಿಗಳು ರಚನೆಯಾಗಿವೆ ಬಾಕಿ ಉಳಿದಿರುವ ಸಮಿತಿಗಳನ್ನು ಶೀಘ್ರ ರಚಿಸುವಂತೆ ಸಲಹೆ ಮಾಡಿದರು.

Facebook Comments

Sri Raghav

Admin