ಕಿರುಕುಳದಿಂದ ಚಾಲಕ ಆತ್ಮಹತ್ಯೆಗೆ ಯತ್ನ : ಬಿಎಂಟಿಸಿ ಸಿಬ್ಬಂದಿ ದಿಢೀರ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

BMTC-Protest

ಬೆಂಗಳೂರು, ಸೆ.19- ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಇಂದು ಬೆಳಗ್ಗೆ ಶಾಂತಿನಗರ ಡಿಪೋದಲ್ಲಿ ನಡೆದಿದೆ. ಅಧಿಕಾರಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಚಾಲಕ ಮಧು ಎಂಬುವವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆಯೇ ಇಂದು ಬೆಳಗ್ಗೆ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗದೆ ಡಿಪೋ ಮ್ಯಾನೇಜರ್ ಕಚೇರಿ ಮುಂದೆ ಪ್ರತಿಭಟನೆಗಿಳಿದರು.

WhatsApp Image 2017-09-19 at 10.14.08 AM

ಸುಮಾರು 4 ತಾಸುಗಳ ಕಾಲ ಧರಣಿ ನಡೆಸಿದ್ದರಿಂದ ಈ ಡಿಪೋದಿಂದ ಯಾವುದೇ ಬಸ್‍ಗಳು ಸಂಚಾರ ನಡೆಸದಿದ್ದರಿಂದ ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿರಿಯ ಅಧಿಕಾರಿಗಳು ಆಗಮಿಸಿ ಸಂಧಾನ ನಡೆಸಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ಮಧು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

WhatsApp Image 2017-09-19 at 10.12.52 AM

Facebook Comments

Sri Raghav

Admin