ನಾನು ಎಲ್ಲಿ ನಿಂತ್ರೂ ಗೆಲ್ತೀನಿ ಬಿಡ್ರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಬೆಂಗಳೂರು, ಸೆ.19- ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿಯ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೆಂದು ವಿ.ಆರ್.ಸುದರ್ಶನ್, ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿಯವರಿಗೆ ಪತ್ರ ಬರೆದಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಿ ನಿಂತುಕೊಂಡರೂ ಚುನಾವಣೆ ಗೆಲ್ಲೋದು ನಾವೇ. 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತೇನೆ ಎಂಬ ವಿಶ್ವಾಸ ನನಗಿದೆ. ಆದರೆ, ನಮ್ಮ ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುತ್ತೇನೆ, ಜಯ ಗಳಿಸುತ್ತೇನೆ ಎಂದು ಹೇಳಿದರು.

ಹೇಳೋದೆಲ್ಲ ಸುಳ್ಳು: ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಾರ್ಜ್‍ಶೀಟ್ ಬಿಡುಗಡೆ ಮಾಡುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಯಾವಾಗ ನಿಜ ಹೇಳಿದ್ದಾರೆ, ಅವರು ಹೇಳೋದೆಲ್ಲ ಸುಳ್ಳು. ಚಾರ್ಜ್‍ಶೀಟ್ ಬಿಡುಗಡೆ ಮಾಡಲಿ, ನೋಡೋಣ ಎಂದು ಹೇಳಿದರು.

Facebook Comments

Sri Raghav

Admin