ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರ

cylinder

ಬೆಂಗಳೂರು, ಸೆ.19- ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದಂಪತಿ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಂದಿರಾನಗರದ ಪ್ರಶಾಂತ್, ಸಂಗೀತಾ, ಪ್ರಭು ಮತ್ತು ನಂದಕಿಶೋರ ಎಂಬುವರು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದು, ಈ ನಾಲ್ವರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಸರ್ಕಾರಿ ರಜೆಯಿದ್ದ ಕಾರಣ ಮಕ್ಕಳು ಮನೆಯಲ್ಲಿಯೇ ಇದ್ದರು. ಬೆಳಗ್ಗೆ ಉಪಹಾರಕ್ಕೆಂದು ಸಿದ್ಧತೆ ಮಾಡುತ್ತಿದ್ದಾಗ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರೂ ಗಂಭೀರ ಗಾಯಗೊಂಡಿದ್ದಾರೆ.

ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ಶಬ್ದ ಕೇಳಿ ನೆರೆಹೊರೆಯವರು ದಾವಿಸಿ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವಲ್ಲಿ ನೆರವಾದರು. ಸುದ್ದಿ ತಿಳಿದ ಇಂದಿರಾನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin