ನಡೆದಾಡುವ ದೇವರ ಆರೋಗ್ಯದಲ್ಲಿ ಏರುಪೇರು

ಈ ಸುದ್ದಿಯನ್ನು ಶೇರ್ ಮಾಡಿ

Siddaganga-Shree--01

ತುಮಕೂರು, ಸೆ.21-ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈಗ ಸುಧಾರಿಸಿಕೊಂಡಿದ್ದಾರೆ. ಭಕ್ತರು ಆತಂಕಪಡುವುದು ಬೇಡ ಎಂದು ಸಿದ್ಧಗಂಗಾ ಸಂಶೋಧನಾ ಕೇಂದ್ರದ ವೈದ್ಯರಾದ ಡಾ.ಪರಮೇಶ್ವರ್ ತಿಳಿಸಿದ್ದಾರೆ.
ನಿನ್ನೆ ಶ್ರೀಗಳಿಗೆ ಗಂಟಲು ನೋವು, ಕೆಮ್ಮು, ನೆಗಡಿ ಕಾಣಿಸಿಕೊಂಡಿದ್ದು, ಕೂಡಲೇ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಡಾ.ಪರಮೇಶ್ವರ್ ಅವರ ತಂಡ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ಪರೀಕ್ಷಿಸಿ ಚಿಕಿತ್ಸೆ ನೀಡಿದ್ದರು.

Siddaganga-Shree--02

ರಾತ್ರಿ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳ ಆರೋಗ್ಯ ಕಾಳಜಿ ನೋಡಿಕೊಳ್ಳುವ ಬಿಜಿಎಸ್ ವೈದ್ಯರು ಮಠಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದು, ಶ್ರೀಗಳು ಆರೋಗ್ಯದಿಂದಿದ್ದಾರೆ. ಅವರಿಗೆ ಈ ಹಿಂದೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದ್ದರಿಂದ ಅಲ್ಲಿಯೇ ಅವರಿಗೆ ಚಿಕಿತ್ಸೆ ನೀಡುವುದು ಸೂಕ್ತ ಎಂದು ಇಂದು ಬೆಳಗ್ಗೆ ಶ್ರೀಗಳನ್ನು ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Siddaganga-Shree--03

ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಮೋಹನ್‍ರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಗೋಪಿನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಮಾಜಿ ಸಂಸದ ಜಿ.ಎಸ್.ಬಸವರಾಜ್, ಜ್ಯೋತಿ ಗಣೇಶ್ ಸೇರಿದಂತೆ ಮತ್ತಿತರ ಪ್ರಮುಖರು ಮಠಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ವಾತಾವರಣದಲ್ಲಿ ಏರುಪೇರಾಗಿರುವುದರಿಂದ ಶ್ರೀಗಳಿಗೆ ಗಂಟಲು ನೋವು, ಕೆಮ್ಮು ಹಾಗೂ ನೆಗಡಿ ಬಂದಿದ್ದು, ಭಕ್ತರು ಆತಂಕ ಪಡುವುದು ಬೇಡ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಡಾ.ಪರಮೇಶ್ವರ್ ಪತ್ರಿಕೆಗೆ ತಿಳಿಸಿದ್ದಾರೆ.

Siddaganga-Shree--04

Facebook Comments

Sri Raghav

Admin