ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದೆ ಕೃಷ್ಣಾ ನದಿ, ಸೇತುವೆ ಮುಳುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು. ಸೆ.21 : ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಭಾರೀ ಪ್ರಮಾಣದಲ್ಲಿ ನೀರನ್ನು ನದೀ ಮೂಲಕ ಆಂದ್ರಪ್ರದೇಶಕ್ಕೆ ಹರಿಬಿಡಲಾಗುತ್ತಿದ್ದು ನದಿ ತೀರದ ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ನಾರಾಯಣಪುರ ಜಲಾಶಯದಿಂದ 2,40,000 ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿರುವ ಕಾರಣ ನದಿ ಪಾತ್ರ ದಲ್ಲಿ ಬರುವ ಕಡದರಗಡ್ಡೆ. ಹಂಚಿನಾಳ. ಯರಗೋಡಿ ಗ್ರಾಮಗಳು ನಡುಗಡ್ಡೆಗಳಾಗಿದ್ದು ಬಾಹ್ಯ ಸಂಪರ್ಕ ಕಳೆದುಕೊಂಡಿವೆ. ಈ ನಡುಗಡ್ಡೆ ಗ್ರಾಮಗಳನ್ನು ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಪ್ರಮಾಣ ಇನ್ನೂ ಹೆಚ್ಚುವ ಸಾದ್ಯತೆ ಇದ್ದು ನದಿ ತೀರದ ಹಳ್ಳಿಗಳ ಜನರು ಎಚ್ಚರಿಕೆಯಿಂದ ಇರುವಂತೆ ಜಲಾಷಯದ ಅಧಿಕಾರಿಗಳು ತಿಳಿಸಿದ್ದಾರೆ.

Facebook Comments

Sri Raghav

Admin