ಮುಂದಿನ ವಾರ ಭಾರತಕ್ಕೆ ಅಮೆರಿಕ ರಕ್ಷಣಾ ಸಚಿವರ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

James-Mattis

ನ್ಯೂಯಾರ್ಕ್, ಸೆ.23- ಅಮೆರಿಕ ರಕ್ಷಣಾ ಸಚಿವ ಜಿಮ್ ಮಟ್ಟಿಸ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಭಾರತವು ಅಮೆರಿಕದ ಅತ್ಯಂತ ಮೌಲ್ಯಯುತ ಮತ್ತು ಪ್ರಭಾವಿ ಮಿತ್ರರಾಷ್ಟ್ರ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ ಬೆನ್ನಲ್ಲೇ ಅಲ್ಲಿನ ರಕ್ಷಣಾ ಸಚಿವರು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವುದು ಪ್ರಾಮುಖ್ಯತೆ ಪಡೆದುಕೊಂಡಿದೆ.

ಮಟ್ಟಿಸ್ ಭೇಟಿ ವೇಳೆ ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಪಟ್ಟ ಕೆಲವು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ. ಸೆ.26ರಿಂದ ಆರಂಭವಾಗುವ ಎರಡು ದಿನಗಳ ಭೇಟಿ ಸಂದರ್ಭದಲ್ಲಿ ಅಮೆರಿಕ ರಕ್ಷಣಾ ಇಲಾಖೆ ಪೆಂಟಗನ್ ಮುಖ್ಯಸ್ಥರು ಇಂಡಿಯಾ ಗೇಟ್‍ನಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲಿದ್ದಾರೆ.

Facebook Comments