ರಾಜ್ಯ ರಾಜಕಾರಣದತ್ತ ಸದಾನಂದಗೌಡ

ಈ ಸುದ್ದಿಯನ್ನು ಶೇರ್ ಮಾಡಿ

sadananda--gowda
ಬೆಂಗಳೂರು, ಸೆ.23- ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಎರಡು ಮಾದರಿಯಲ್ಲಿ ಪ್ರಚಾರ ಸಮಿತಿಗಳನ್ನು ರಚಿಸಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ಸಮಿತಿಗಳನ್ನು ರಚಿಸಿ ಭರ್ಜರಿ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಕೇಂದ್ರ ಸಾಂಖ್ಯಿಕ ಖಾತೆ ಸಚಿವರಾದ ಡಿ.ವಿ. ಸದಾನಂದಗೌಡರನ್ನು ಬಿಜೆಪಿ ಚುನಾವಣಾ ಸಾಂಪ್ರದಾಯಿಕ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ನೇಮಕ ಮಾಡಿದ್ದಾರೆ.
ಈ ಸಮಿತಿಯಲ್ಲಿ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಶೋಭಾ ಕರಂದ್ಲಾಜೆ, ಆರ್. ಅಶೋಕ್, ಜಗ್ಗೇಶ್, ತೇಜಸ್ವಿನಿ ಗೌಡ ಸೇರಿದಂತೆ 28 ಮಂದಿ ಸದಸ್ಯರಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಈಗಾಗಲೇ ಬಿ.ಜೆ.ಪಿ. ಕಾರ್ಯೋನ್ಮುಖವಾಗಿದೆ.  ಸಾಂಪ್ರದಾಯಿಕ ಸಮಿತಿ ಎಂದಿನಂತೆ ಸಮಾವೇಶಗಳು, ಸಭೆಗಳಲ್ಲಿ ಪ್ರಚಾರ ನಡೆಸಿದರೆ, ಅಸಂಪ್ರದಾಯಿಕ ಪ್ರಚಾರ ಸಮಿತಿ ಸಾಮಾಜಿಕ ತಾಣಗಳ ಮೂಲಕ ಪ್ರಚಾರ ನಡೆಸಲಿದೆ. ಚುನಾವಣೆ ಹೊಸ್ತಿಲಲ್ಲಿ ಮಿಷನ್ 150 ಗುರಿಯೊಂದಿಗೆ ಮತ್ತೆ ಅಧಿಕಾರ ಹಿಡಿಯಲು ಭಾರೀ ತಂತ್ರಗಳನ್ನು ಹೆಣೆಯುತ್ತಿರುವ ಬಿಜೆಪಿ ಇದಕ್ಕಾಗಿ ಬೇರು ಮಟ್ಟದಿಂದ ಪಕ್ಷವನ್ನು ಬಲಪಡಿಲು ಮುಂದಾಗಿದೆ.

Facebook Comments