ಅಪ್ರಾಪ್ತ ಬಾಲಕಿ ಮೇಲೆ ಮಾವನಿಂದಲೇ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

rape

ಬೆಂಗಳೂರು, ಸೆ.24- ಖಾಸಗಿ ಶಾಲೆಯಲ್ಲಿ 6ನೆ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಮಾವನೇ ಅತ್ಯಾಚಾರವೆಸಗಿರುವ ಹೀನ ಘಟನೆ ಯಲಹಂಕದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿ ಗಿರೀಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.   ಪಕ್ಕದ ಮನೆಯಲ್ಲೇ ವಾಸಿಸುತ್ತಿದ್ದ ಆರೋಪಿ ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಬಾಲಕಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದಾನೆ.
ಕಾಮುಕನ ನೀಚ ಕೃತ್ಯವನ್ನು ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಗಿರೀಶ್‍ನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಪೋಸ್ಕೋ ಕಾಯ್ದೆ ದಾಖಲಿಸಿ ಜೈಲಿಗಟ್ಟಿದ್ದಾರೆ.

Facebook Comments

Sri Raghav

Admin