ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನವರ ಪತ್ನಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಮೈಸೂರು, ಸೆ.24-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಚಾಮುಂಡಿ ಬೆಟ್ಟಕ್ಕೆ ಬಂದು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನವರಾತ್ರಿ ಆರಂಭವಾದ ಸೆ.21ರಿಂದಲೂ ಪಾರ್ವತಿಯವರು ಪ್ರತಿದಿನ ಮುಂಜಾನೆ 4 ಗಂಟೆಗೆ ಬೆಂಗಳೂರಿನಿಂದ ಹೊರಟು ನೇರ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗುತ್ತಿದ್ದಾರೆ.  ನವರಾತ್ರಿ ಮೊದಲನೆ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವ ಮೊದಲೇ ಪಾರ್ವತಿಯವರು ಬೆಟ್ಟಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಹೋಗಿದ್ದಾರೆ. ನವರಾತ್ರಿ ಮುಗಿಯುವವರೆಗೂ ಅವರು ಪೂಜೆ ಸಲ್ಲಿಸಲಿದ್ದಾರೆ. ಇಂದು ಕೂಡ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ತಮ್ಮ ಪತಿಗೆ ರಾಜಕೀಯವಾಗಿ ಯಾವ ಸಮಸ್ಯೆ ಬಾರದಿರಲಿ. ಮುಂದೆಯೂ ಅವರೇ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥನೆ ಮಾಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿದಿನ ಒಂದು ಗಂಟೆಗೂ ಹೆಚ್ಚು ಕಾಲ ಪಾರ್ವತಿಯವರು ಪತಿಯ ಹೆಸರಲ್ಲೇ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅವರೊಂದಿಗೆ ಕುಟುಂಬದ ಕೆಲ ಸದಸ್ಯರು ಆಗಮಿಸುತ್ತಿದ್ದಾರೆ.  ಇಂದು ಬೆಳಗ್ಗೆ ಪೂಜೆ ಸಲ್ಲಿಸಿ ವಾಪಸ್ಸಾಗುತ್ತಿದ್ದಾಗ ಮಾಧ್ಯಮದ ಕೆಲ ಛಾಯಾಗ್ರಾಹಕರು ಅವರ ಫೋಟೊ ಕ್ಲಿಕ್ಕಿಸಲು ಮುಂದಾದಾಗ ಪೊಲೀಸರು ಮತ್ತು ಭದ್ರತಾ ಪಡೆಯವರು ಕ್ಯಾಮೆರಾ ಕಿತ್ತುಕೊಂಡರು. ಇದರಿಂದಾಗಿ ಕೆಲ ನಿಮಿಷ ಮಾಧ್ಯಮದವರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಕ್ಯಾಮೆರಾ ಹಿಂದಿರುಗಿಸಲಾಯಿತು.

Facebook Comments

Sri Raghav

Admin