ಬಿಎಸ್‍ವೈ ವಿರುದ್ಧ ಸ್ಪರ್ಧೆಗೆ ನಾನು ರೆಡಿ : ವರ್ತೂರು ಪ್ರಕಾಶ್ ಸವಾಲ್

ಈ ಸುದ್ದಿಯನ್ನು ಶೇರ್ ಮಾಡಿ

Varturu-Praksha--014

ರಾಯಚೂರು, ಸೆ.24-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಾನೇ ಕಾಂಗ್ರೆಸ್ ಅಭ್ಯರ್ಥಿ ಎಂದು ಶಾಸಕ ವರ್ತೂರು ಪ್ರಕಾಶ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಯಾವುದೇ ಭಾಗದಲ್ಲಿ ಬಿಎಸ್‍ವೈ ಸ್ಪರ್ಧಿಸಿದರೂ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನು ಕಣಕ್ಕಿಳಿಯುತ್ತೇನೆ ಎಂದು ಹೇಳಿದರು. ಸದ್ಯದಲ್ಲೇ ನಾನು ಕಾಂಗ್ರೆಸ್‍ಗೆ ಸೇರುತ್ತೇನೆ. ಹೈಕಮಾಂಡ್ ನನ್ನನ್ನು ಪರಿಗಣಿಸಿ ಟಿಕೆಟ್ ನೀಡಿದರೆ ಯಡಿಯೂರಪ್ಪನವರ ವಿರುದ್ಧ ತೊಡೆ ತಟ್ಟುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin