ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

Chunchashree--01

ನಾಗಮಂಗಲ, ಸೆ.24-ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠವು ಕಳೆದ 39 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಕೊಡುವ ಚುಂಚ ಶ್ರೀ ಪ್ರಶಸ್ತಿಯು ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಿಂತ ಹೆಚ್ಚಿನ ಮಹತ್ವದ್ದು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.  ಶ್ರೀ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ 39ನೇ ರಾಜ್ಯ ಮಟ್ಟದ ಶ್ರೀ ಕಾಲಭೈರವೇಶ್ವರ ಸ್ವಾಮಿ ಜಾನಪದ ಕಲಾಮೇಳ ಹಾಗೂ ಚುಂಚಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠವು ನೀಡುತ್ತಿರುವ ಚುಂಚಶ್ರೀ ಪ್ರಶಸ್ತಿಯು ಪಡೆಯಲು ಯಾವುದೇ ಶಿಫಾರಸು ಬೇಕಿಲ್ಲ. ಕ್ರೀಡೆ, ಸಾಂಸ್ಕøತಿಕ, ರಾಜಕೀಯ, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದೆ ಎಂದು ಬಣ್ಣಿಸಿದರು.

Sada--04

ಶ್ರೀ ಮಠವು ಶೈಕ್ಷಣಿಕ, ಧಾರ್ಮಿಕವಾಗಿ ಎಲ್ಲಾ ಕ್ಷೇತ್ರಗಳನ್ನು ಮೀರಿಸಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸುತ್ತಿದೆ ಎಂದರು.  ಡಾ.ಮಾಲತಿಹೊಳ್ಳ, ಸಾಕ್ಷಿ ಮಲ್ಲಿಕ್, ಸುಕ್ರಿಬೊಮ್ಮಗೌಡ, ಡಾ.ಡಿ.ಕೆ.ರಾಜೇಂದ್ರ ಹಾಗೂ ಪ್ರೊ.ಶಿವರಾಮ್ ಅಗ್ನಿಹೊತ್ರಿ ಅವರಿಗೆ ಚುಂಚಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Sada-02

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿದ್ದರು. ಸಂಸದ ಸಿ.ಎಸ್.ಪುಟ್ಟರಾಜು, ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕ ವಿಶುಕುಮಾರ್, ಮಾಜಿ ಶಾಸಕರಾದ ಶಿವರಾಮೇಗೌಡ, ಸುರೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

Sada--01

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin