ವಿಶ್ವಸಂಸ್ಥೆಯಲ್ಲಿ ಸುಷ್ಮಾ ಸೂಪರ್ ಭಾಷಣಕ್ಕೆ ಕಾಂಗ್ರೆಸ್ ಬಹುಪರಾಕ್

ಈ ಸುದ್ದಿಯನ್ನು ಶೇರ್ ಮಾಡಿ

Sushma--01

ನವದೆಹಲಿ, ಸೆ.24-ವಿಶ್ವಸಂಸ್ಥೆಯ 72ನೇ ಸಾಮಾನ್ಯ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾಡಿರುವ ಭಾಷಣ ಮತ್ತು ಅದರಲ್ಲಿನ ಸಾರಾಂಶಗಳನ್ನು ಪ್ರತಿಪಕ್ಷ ಕಾಂಗ್ರೆಸ್ ಮುಕ್ತಕಂಠದಿಂದ ಸ್ವಾಗತಿಸಿದೆ. ಅಲ್ಲದೇ ಸುಷ್ಮಾ ಅವರನ್ನು ಅಭಿನಂದಿಸಿದೆ.  ಈ ಕುರಿತು ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಸುಷ್ಮಾ ಸ್ವರಾಜ್ ಅವರು ತಮ್ಮ ಭಾಷಣದಲ್ಲಿ ಭಾರತದ ಶಕ್ತಿ-ಸಾಮಥ್ರ್ಯವನ್ನು ಎತ್ತಿ ಹಿಡಿದಿದ್ದಾರೆ. ಕಳೆದ 70 ವರ್ಷಗಳಲ್ಲಿ ಭಾರತ ಮಾಡಿದ್ದೇನು ಎಂದು ಪ್ರಶ್ನಿಸುವ ಮಂದಿಗೆ ತಮ್ಮ ಭಾಷಣದಲ್ಲಿ ಅವರು ಸೂಕ್ತ ಉತ್ತರ ನೀಡಿದ್ದಾರೆ ಎಂದು ಪ್ರಶಂಸಿಸಿದ್ದಾರೆ.

ನಾನು ಈಗ ಎಲ್ಲಿದ್ದೇವೆ, ಪಾಕಿಸ್ತಾನ ಎಲ್ಲಿದೆ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಕಳೆದ 70 ವರ್ಷಗಳಲ್ಲಿ ಭಾರತ ಏನ್ನೆಲ್ಲಾ ಸಾಧನೆಗಳನ್ನು ಮಾಡಿದೆ ಎಂದು ತಮ್ಮ ಭಾಷಣದಲ್ಲಿ ಸುಷ್ಮಾ ತಿಳಿಸಿರುವುದು ಅತ್ಯಂತ ಸಂದರ್ಭೋಚಿತವಾಗಿದೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಸುರ್ಜಿವಾಲಾ ತಿಳಿಸಿದ್ದಾರೆ.

Facebook Comments

Sri Raghav

Admin