ಸಿದ್ದರಾಮಯ್ಯ ಬೀದಿದಾಸಯ್ಯ ಎಂದು ಈಶ್ವರಪ್ಪ ಟೀಕಾ ಪ್ರಹಾರ

ಈ ಸುದ್ದಿಯನ್ನು ಶೇರ್ ಮಾಡಿ

Eshwarappa-And-Siddaramaiah

ಶಿವಮೊಗ್ಗ, ಸೆ.24- ಹೋದಲ್ಲೆಲ್ಲ ಬೀದಿ ದಾಸಯ್ಯರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ಮೀಟರ್ ಇಲ್ಲ ಎಂದು ಸಿದ್ದರಾಮಯ್ಯ ಅವರ ಟೀಕೆಗೆ ತಿರುಗೇಟು ನೀಡಿರುವ ಈಶ್ವರಪ್ಪ, ನಮ್ಮ ಮೀಟರ್ ಏನೆಂಬುದು ಎಲ್ಲರಿಗೂ ಗೊತ್ತಿದೆ.ದ್ವೇಷ ರಾಜಕಾರಣದ ಜತೆಗೆ ಭ್ರಷ್ಟಾಚಾರದಲ್ಲಿ ತೊಡಗಿರುವ ಅವರ ಸರ್ಕಾರ ಮಾಡುತ್ತಿರುವುದು ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಕೀಳುಮಟ್ಟದ ಹೇಳಿಕೆಗಳನ್ನು ನಿಲ್ಲಿಸಬೇಕು. ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Facebook Comments

Sri Raghav

Admin