2ಕೋಟಿ ನೀಡುವಂತೆ ಉದ್ಯಮಿಗೆ ಕೊಲೆ ಬೆದರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Phone-Thratಬೆಂಗಳೂರು, ಸೆ.24-ಎರಡು ಕೋಟಿ ರೂ. ನೀಡುವಂತೆ ಇಲ್ಲಿನ ಉದ್ಯಮಿಯೊಬ್ಬರಿಗೆ ಕರೆ ಮಾಡಿರುವ ಅಪರಿಚಿತರು ಜೀವ ಬೆದರಿಕೆ ಒಡ್ಡಿರುವ ಘಟನೆ ನಡೆದಿದೆ. ಸದಾಶಿವನಗರದ ಉದ್ಯಮಿಯೊಬ್ಬರಿಗೆ ಅಪರಿಚಿತ ದುಷ್ಕರ್ಮಿಗಳು ದೂರವಾಣಿ ಕರೆ ಮಾಡಿ ನಮಗೆ ಎರಡು ಕೋಟಿ ನೀಡಬೇಕು. ಇಲ್ಲವಾದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin