ಚಾಮುಂಡೇಶ್ವರಿಗೆ ಡಿ.ಕೆ.ಶಿ ವಿಶೇಷ ಪೂಜೆ, ಬೆಳ್ಳಿ ಆನೆಗಳ ಸಮರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar--01

ಮೈಸೂರು,ಸೆ.25-ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ಕುಟುಂಬ ಸದಸ್ಯರ ಜೊತೆ ತೆರಳಿದ ಶಿವಕುಮಾರ್ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇದೇ ವೇಳೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ  31 ಕೆಜಿ ತೂಕದ ಎರಡು ಬೆಳ್ಳಿ ಆನೆಗಳನ್ನ ಅರ್ಪಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್, ಎರಡು ದೊಡ್ಡ ಬೆಳ್ಳಿ ಆನೆಗಳನ್ನ ದೇವಿಗೆ ಸಲ್ಲಿಸಿದರು..

DKShivakua-r

ಆದಾಯ ತೆರಿಗೆ ಇಲಾಖೆ ದಾಳಿ ನಂತರ ದೇವಸ್ಥಾನಕ್ಕೆ ಆಗಮಿಸಿ ಡಿಕೆಶಿ ಹರಕೆ ಕಟ್ಟಿಕೊಂಡಿದ್ದರು. ಹೀಗಾಗಿ ಇವತ್ತು ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿ ಆನೆ ಸಮರ್ಪಣೆ ಮಾಡಿದ್ದಾರೆ. ಭಾನುವಾರದಂದು ಡಿಕೆಶಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ನೆರವೇರಿಸಿ ಸುಬ್ರಹ್ಮಣ್ಯ ಸ್ವಾಮಿಗೆ ಹರಕೆ ತೀರಿಸಿದ್ದರು.

Facebook Comments

Sri Raghav

Admin