ಬನಾರಸ್ ಹಿಂದೂ ವಿವಿ ಹಿಂಸಾಚಾರ : 1200ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಎಫ್‍ಐಆರ್

ಈ ಸುದ್ದಿಯನ್ನು ಶೇರ್ ಮಾಡಿ

Police--01

ವಾರಾಣಸಿ/ಲಕ್ನೋ, ಸೆ.25-ಉತ್ತರಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಕರ್ತವ್ಯ ಲೋಪ ಆರೋಪದ ಮೇಲೆ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.

ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ಹಿಂಸಾಚಾರ ನಿಯಂತ್ರಿಸಲು ವಿಫಲರಾದ ಆರೋಪದ ಮೇಲೆ ಲಂಕಾ ಠಾಣಾಧಿಕಾರಿ, ಸರ್ಕಲ್ ಇನ್ಸ್‍ಪೆಕ್ಟರ್ ಹಾಗೂ ಹೆಚ್ಚುವರಿ ನಗರ ದಂಡಾಧಿಕಾರಿ ಅವರ ವಿರುದ್ಧ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿವರವಾದ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.
ಈ ಕೃತ್ಯದಲ್ಲಿ ಹೊರಗಿವರ ಕೈವಾಡ ಇದೆ ಎಂದು ಪೊಲೀಸರು ಹೇಳಿದ್ದಾರೆ. ಇದು ನಕ್ಸಲ್ ಚಟುವಟಿಕೆಯ ರೂಪ ಎಂದು ಬಿಜೆಪಿ ನಾಯಕ ಡಾ. ಸುಬ್ರಮಣಿಯನ್‍ಸ್ವಾಮಿ ಆರೋಪಿಸಿದ್ದರೆ, ಬೇಟಿ ಬಚಾವೋ ಬೇಟಿ ಪಢಾವೋ ಎಂದರೆ ಪೊಲೀಸರ ಲಾಠಿ ಪ್ರಹಾರವೇ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಟೀಕಿಸಿದ್ದಾರೆ.

Facebook Comments

Sri Raghav

Admin