ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನಲ್ಲಿ 5 ಕೋಟಿ ಮೌಲ್ಯದ ಹಳೆಯ ನೋಟು ಪತ್ತೆ…!

ಈ ಸುದ್ದಿಯನ್ನು ಶೇರ್ ಮಾಡಿ

Old-Notes

ಬೆಂಗಳೂರು, ಸೆ.25- ಅಮಾನ್ಯಗೊಂಡಿರುವ ನೋಟು ಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 5.40 ಕೋಟಿ ರೂ. ಮೌಲ್ಯದ ಒಂದು ಸಾವಿರ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಜಯನಗರದ ಮಹಮ್ಮದ್ ಅಸ್ಲಂ, ಬಳ್ಳಾರಿಯ ಕಾಳಿಂಗಪ್ಪ ಮತ್ತು ಕಾರು ಚಾಲಕ ಮಂಜುನಾಥ್ ಬಂಧಿತ ಆರೋಪಿಗಳು. ಮಹಾಲಕ್ಷ್ಮಿ ಲೇಔಟ್‍ನ ಈಜುಕೊಳದ ಬಳಿ ಹಳೆ ನೋಟುಗಳನ್ನು ಕಾರಿನಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮಹಾಲಕ್ಷ್ಮಿ ಲೇಔಟ್ ಪೊಲೀಸರಿಗೆ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಶಿಫ್ಟ್ ಡಿಸೈರ್ ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಅದರಲ್ಲಿ ಅಮಾನ್ಯಗೊಂಡಿದ್ದ 1 ಸಾವಿರ ರೂ. ಮುಖಬೆಲೆಯ 5 ಕೋಟಿ 40 ಲಕ್ಷ ರೂ. ಹಣವಿದ್ದುದು ಕಂಡುಬಂದಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಿ ಕಾರು ಹಾಗೂ ಹಣವನ್ನು ವಶಕ್ಕೆ ತೆಗೆದುಕೊಂಡು ಈ ಹಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಈ ಹಣ ಯಾರಿಗೆ ಸೇರಿದ್ದು, ಹಣ ಬದಲಾವಣೆಗಾಗಿ ಕಾರು ಎಲ್ಲಿಗೆ ಹೋಗುತ್ತಿತ್ತು ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. 500, 1000ರೂ. ಮುಖಬೆಲೆಯ ಹಳೆ ನೋಟುಗಳು ಅಮಾನ್ಯಗೊಂಡು ಒಂದು ವರ್ಷ ಸಮೀಪಿಸುತ್ತಿದ್ದರೂ ಅಲ್ಲಲ್ಲಿ ಹಳೆ ನೋಟುಗಳನ್ನು ಸಾಗಣೆ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಚ್ಚರಿ ಉಂಟುಮಾಡಿದೆ.

Facebook Comments

Sri Raghav

Admin