ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Gokak-Murder--01

ಗೋಕಾಕ, ಸೆ.25- ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಳೆದ ರಾತ್ರಿ ನಗರದಲ್ಲಿ ನಡೆದಿದೆ. ರೋಹಿತ್ ಪಾಟೀಲ (25) ಹತ್ಯೆಯಾಗಿದ್ದು , ಕಳೆದ ರಾತ್ರಿ ಸುಮಾರು 10.30ರ ಸಂದರ್ಭದಲ್ಲಿ ಅಪ್ಪಾರಕೂಟ ಬಳಿ ನಿಂತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆತನ ಮೇಲೆ ಎರಗಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದನ್ನು ಕಂಡ ಕೆಲವರು ಭಯಭೀತರಾಗಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ತೀವ್ರವಾಗಿ ಗಾಯಗೊಂಡಿದ್ದ ರೋಹಿತ್‍ನನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

ಕಳೆದ ನಾಗರಪಂಚಮಿ ಹಬ್ಬದ ಸಂದರ್ಭದಲ್ಲಿ ತೇರು ಎಳೆಯುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ನಂತರ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ ನಡೆದಿತ್ತು. ಈ ಗಲಾಟೆಯಲ್ಲಿ ರೋಹಿತ್ ಕೂಡ ಇದ್ದ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ವೈಷಮ್ಯ ಬೆಳೆದು ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

 

Facebook Comments

Sri Raghav

Admin