ಪತ್ನಿ ಹೊಟ್ಟೆ ಮೇಲೆ ಬಿಸಿ ಇಸ್ತ್ರಿ ಪೆಟ್ಟಿಗೆಯಿಟ್ಟು ಹಿಂಸಿಸುತ್ತಿದ್ದ ವಿಕೃತ ಪತಿಯ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Arrested-Man

ಬೆಂಗಳೂರು, ಸೆ.26-ಕೌಟುಂಬಿಕ ವಿಚಾರವಾಗಿ ಪತ್ನಿಯೊಂದಿಗೆ ಜಗಳವಾಡಿ ಆಕೆ ಮೇಲೆ ಹಲ್ಲೆ ನಡೆಸಿ ಹೊಟ್ಟೆ ಮೇಲೆ ಬಿಸಿ ಇಸ್ತ್ರಿ ಪೆಟ್ಟಿಗೆಯಿಟ್ಟು ವಿಕೃತವಾಗಿ ವರ್ತಿಸಿದ್ದ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಪತಿಯ ವರ್ತನೆಯಿಂದ ಗಾಯಗೊಂಡಿರುವ ಪತ್ನಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಟೀರಿಯರ್ ಡೆಕೋರೇಟರ್ ಆಗಿರುವ ದಿಲೀಪ್‍ಕುಮಾರ್ ಎಂಬಾತ ಕೌಟುಂಬಿಕ ವಿಚಾರವಾಗಿ ಪತ್ನಿ ಜೊತೆ ಆಗಾಗ್ಗೆ ಜಗಳ ಮಾಡುತ್ತಿದ್ದ ಎನ್ನಲಾಗಿದ್ದು, ಸೆ.24ರಂದು ಕುಡಿದ ಮತ್ತಿನಲ್ಲಿ ಪತ್ನಿಗೆ ಒಡೆದು ಇಸ್ತ್ರೀ ಪೆಟ್ಟಿಗೆಯಿಂದ ಸುಟ್ಟಿದ್ದಾನೆ. ಇದರಿಂದ ನೊಂದ ಪತ್ನಿ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ದಿಲೀಪ್‍ಕುಮಾರ್‍ನನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Facebook Comments

Sri Raghav

Admin