ಎಚ್‍ಡಿಕೆ ಸಂಪೂರ್ಣ ಚೇತರಿಕೆ, ನಾಳೆ ಆಸ್ಪತ್ರೆಯಿಂದ ಮನೆಗೆ

ಈ ಸುದ್ದಿಯನ್ನು ಶೇರ್ ಮಾಡಿ

Kumara

ಬೆಂಗಳೂರು,ಸೆ.27- ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡಿದ್ದು, ನಾಳೆ ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡುವ ಸಂಭವವಿದೆ. ಹೆಚ್‍ಡಿಕೆ ಅವರನ್ನು ಅಬ್ಸರ್ವೇಷನïಗಾಗಿ ಐಸಿಯುನಲ್ಲಿಡ ಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಮಾರಸ್ವಾಮಿ ಕುಟುಂಬ ಸಮೇತ ಸಿಂಗಾಪುರಕ್ಕೆ ಹೋಗಲಿದ್ದಾರೆ. ಸುಮಾರು 15 ದಿನ ಅವರು ಕುಟುಂಬದವರೊಂದಿಗೆ ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ವೈದ್ಯರ ಸೂಚನೆ ಮೇರೆಗೆ ವಿದೇಶಕ್ಕೆ ತೆರಳಲು ಹೆಚ್‍ಡಿಕೆ ಸಮ್ಮತಿಸಿದ್ದಾರೆ. ಕುಮಾರಸ್ವಾಮಿ ಚೇತರಿಸಿಕೊಂಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಯಾರೊಬ್ಬರು ಭೇಟಿ ಮಾಡದಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

 

Facebook Comments

Sri Raghav

Admin