ಕಾಂಗ್ರೆಸ್ ನಿರ್ಲಕ್ಷ್ಯದಿಂದ ಬೇಸರವಾಗಿದೆ : ನೆ.ಲ.ನರೇಂದ್ರ ಬಾಬು

ಈ ಸುದ್ದಿಯನ್ನು ಶೇರ್ ಮಾಡಿ

NarendraBabu

ಬೆಂಗಳೂರು,ಸೆ.27-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ಪಕ್ಷ ನನ್ನನ್ನು ನಿರ್ಲಕ್ಷಿಸಿದೆ ಎಂದು ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಬೇಸರ ವ್ಯಕ್ತಪಡಿಸಿದರು.  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಿರ್ಲಕ್ಷ್ಯ ಧೋರಣೆಯಿಂದ ನನಗೆ ನೋವಾಗಿದೆ. ಕುತಂತ್ರ ಬುದ್ದಿ ಹಾಗೂ ಪಕ್ಷ ದ್ರೋಹಿಗಳಿಗೆ ಬೆಲೆಯಿದೆ ಹೊರತು ನನ್ನಂತಹ ನಿಷ್ಠಾವಂತ, ಪ್ರಾಮಾಣಿಕರಿಗೆ ಬೆಲೆಯಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಅಧಿಕೃತವಾಗಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರು.

ಪಕ್ಷದಲ್ಲಿ 35 ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ಮೂರು ಬಾರಿ ಕಾರ್ಪೊರೇಟರ್ , ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನನ್ನನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ. ಆಂತರಿಕ ಶತ್ರುಗಳು ಹಾಗೂ ಪಕ್ಷ ದ್ರೋಹಿಗಳ ವಿರುದ್ದ ವರಿಷ್ಠರು ಎಚ್ಚರ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನನ್ನಂತ ಪ್ರಾಮಾಣಿಕರು ಪಕ್ಷ ಬಿಡುವುದು ಖಚಿತ ಎಂದು ಹೇಳಿದ್ದಾರೆ.

Facebook Comments

Sri Raghav

Admin