ಗೋವಾ ಕನ್ನಡಿಗರ ಮೇಲಿನ ದೌರ್ಜನ್ಯಕ್ಕೆ ಸಿಎಂ ತೀವ್ರ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.27-ಗೋವಾದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ನಡುವಿನ ಸಾಮರಸ್ಯ ಹಾಳಾಗಲಿದೆ ಎಂದು ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ. ಕನ್ನಡಿಗರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಬೇರೆ ಬೇರೆ ರಾಜ್ಯಗಳ ಜನರು ಬೇರೆ ರಾಜ್ಯಳಲ್ಲಿ ವಾಸ ಮಾಡುತ್ತಾರೆ. ನಮ್ಮಲ್ಲಿ ಆಂಧ್ರ, ತಮಿಳುನಾಡು , ಕೇರಳ ರಾಜ್ಯಗಳ ಜನರು ವಾಸ ಮಾಡುತ್ತಾರೆ ಯಾವುದೇ ರಾಜ್ಯಗಳ ಜನರು ವಾಸ ಮಾಡಿದರೂ ಅವರಿಗೆ ರಕ್ಷಣೆ ನೀಡುವುದು ಸ್ಥಳೀಯ ಸರ್ಕಾರದ ಜವಾಬ್ದಾರಿ.

ಗೋವಾದಲ್ಲಿ ಕನ್ನಡಿಗರು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದರೆ ಅದನ್ನು ತೆರವುಗೊಳಿಸಲು ನಾನು ಅಡ್ಡಿಪಡಿಸುವುದಿಲ್ಲ. ಆದರೆ, ತೆರವುಗೊಂಡವರಿಗೆ ಪುನರ್‍ವಸತಿ ಕಲ್ಪಿಸುವುದು ಅಲ್ಲಿನ ಸರ್ಕಾರದ ಜವಾಬ್ದಾರಿ ಎಂದರು. ಒಕ್ಕೂಟ ವ್ಯವಸ್ಥೆಯಲ್ಲಿ ಪರಸ್ಪರ ಸಹಕಾರ ಇರಬೇಕಾಗಿರುವುದು ಅಗತ್ಯ. ಇಲ್ಲದೇ ಹೋದರೆ ಸಾಮರಸ್ಯ ಇರುವುದಿಲ್ಲ. ಗೋವಾ ಕನ್ನಡಿಗರ ಮೇಲಿನ ದೌರ್ಜನ್ಯದ ಬಗ್ಗೆ ನಾನು ಅಲ್ಲಿನ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಜತೆಗೆ ಖುದ್ದಾಗಿಯೂ ಮಾತನಾಡುತ್ತೇನೆ ಎಂದು ಸಿಎಂ ಹೇಳಿದರು.

Facebook Comments

Sri Raghav

Admin