ಬಿಎಚ್‍ಯು ಹಿಂಸಾಚಾರದಲ್ಲಿ ಸಮಾಜಘಾತುಕ ಶಕ್ತಿಗಳ ಪಾತ್ರವಿದೆ : ಯೋಗಿ

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath--01

ಗೋರಖ್‍ಪುರ್, ಸೆ.27-ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ (ಬಿಎಚ್‍ಯು) ಇತ್ತೀಚೆಗೆ ನಡೆದ ಗಲಭೆ ಮತ್ತು ಹಿಂಸಾಚಾರ ಘಟನೆಗಳಲ್ಲಿ ಸಮಾಜಘಾತುಕ ಶಕ್ತಿಗಳ ಪಾತ್ರ ಇರುವುದಾಗಿ ಆರಂಭಿಕ ತನಿಖೆ ಹೇಳುತ್ತಿವೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.  ಗೋರಖ್‍ಪುರ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ಅರಾಜಕತೆ ಸೃಷ್ಟಿಸುವ ಯಾರೇ ಆಗಲಿ ಅವರನ್ನು ಸುಮ್ಮನೇ ಬಿಡುವುದಿಲ್ಲ ಎಂದು ಗುಡುಗಿದರು.

ಈ ಹಿಂಸಾಚಾರ ಘಟನೆಗಳಲ್ಲಿ ಸಮಾಜ ವಿದ್ರೋಹ ಶಕ್ತಿಗಳು ಶಾಮೀಲಾಗಿರುವ ಬಗ್ಗೆ ತನಿಖೆಯ ಮೇಲ್ನೋಟದ ವರದಿಗಳು ಸಲಹೆ ಮಾಡಿವೆ. ಈ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದರು.  ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಘಟನೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ ಇಬ್ಬರು ಪತ್ರಕರ್ತರೂ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದರು.

Facebook Comments

Sri Raghav

Admin