ಕೇರಳದಲ್ಲಿ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

Rape-Girl

ಕೊಲ್ಲಂ, ಸೆ.28-ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದುರಾಚಾರ ಪ್ರಕರಣಗಳಿಂದ ಸಾರ್ವಜನಿಕರು ಆತಂಕಗೊಂಡಿರುವಾಗಲೇ ಕರಾವಳಿ ರಾಜ್ಯ ಕೇರಳದಲ್ಲಿ ಏಳು ವರ್ಷದ ಬಾಲಕಿಯೊಬ್ಬಳ ಮೇಲೆ ಸಂಬಂಧಿಕನೊಬ್ಬ ಅತ್ಯಾಚಾರ ಎಸಗಿ ಕೊಂದಿರುವ ಘೋರ ಘಟನೆ ನಡೆದಿದೆ. ಈ ಸಂಬಂಧ ಬಾಲಕಿಯ ಸಂಬಂಧಿ ರಾಜೇಶ್ ಎಂಬ ಯುವಕನನ್ನು ಬಂಧಿಸಲಾಗಿದೆ. ಈತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಕೊಂದು ಕೊಲ್ಲಂ ಜಿಲ್ಲೆಯ ಕುಳತಪುಳದ ರಬ್ಬರ್ ಎಸ್ಟೇಟ್‍ನಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದ. ತನಿಖೆ ಆರಂಭಿಸಿದ ಪೊಲೀಸರು ಈತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಹೀನ ಕೃತ್ಯ ಬಯಲಾಯಿತು.

Facebook Comments

Sri Raghav

Admin