ಗೋವಾ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಸ್ಪೀಕರ್ ಕೋಳಿವಾಡ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Koliwad

ಬೆಂಗಳೂರು, ಸೆ.28-ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ಧ್ವಂಸಗೊಳಿಸಿರುವುದಕ್ಕೆ ವಿಧಾನಸಭಾ ಅಧ್ಯಕ್ಷ ಕೆ.ಬಿ.ಕೋಳಿವಾಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಗೋವಾದಲ್ಲಿ ಕನ್ನಡಿಗರನ್ನು ಏಕಾಏಕಿ ಒಕ್ಕಲೆಬ್ಬಿಸಿರುವುದು ಸರಿಯಲ್ಲ. ಅಲ್ಲಿನ ಸರ್ಕಾರ ಹೀಗೆ ನಡೆದುಕೊಂಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗೋವಾ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸ್ಪಂದಿಸಬೇಕಿದೆ ಎಂದು ಹೇಳಿದರು.

ಅಧಿವೇಶನ:

ನವೆಂಬರ್‍ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದು ಕೋಳಿವಾಡ ಹೇಳಿದರು. ಬೆಳಗಾವಿಯಲ್ಲಿ ಒಂದು ತಿಂಗಳು ಅಧಿವೇಶನ ನಡೆಸಬೇಕೆಂಬುದು ನನ್ನ ಆಸೆಯಾಗಿದೆ. ಆದರೆ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುವುದೋ ಕಾದುನೋಡಬೇಕಿದೆ ಎಂದು ತಿಳಿಸಿದರು.

Facebook Comments

Sri Raghav

Admin