ಮನೆಗೆ ನುಗ್ಗಿ ಮಹಿಳೆಯನ್ನು ರೇಪ್ ಮಾಡಿದ್ದ ಆರೋಪಿಗಳ ಅಂದರ್

ಈ ಸುದ್ದಿಯನ್ನು ಶೇರ್ ಮಾಡಿ

Rape-Dharwad

ಧಾರವಾಡ, ಸೆ.28-ಮನೆಗೆ ನುಗ್ಗಿ ಮಹಿಳೆಯೊಬ್ಬರನ್ನು ಅತ್ಯಾಚಾರ ವೆಸಗಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗರಗ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಕ್ತುಂ ಸಾಬಾ ತಲ್ಲೂರ್(35), ಈರಪ್ಪ ಅರವಳ್ಳಿ(35) ಬಂಧಿತ ಆರೋಪಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು. ಈ ಸಂಬಂಧ ನೊಂದ ಸಂತ್ರಸ್ತೆ ಗರಗ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Facebook Comments

Sri Raghav

Admin