3 ತಿಂಗಳಲ್ಲಿ ಜಯಲಲಿತಾ ಸಾವಿನ ತನಿಖಾ ವರದಿ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Jayalalithaa-021

ಚೆನ್ನೈ, ಸೆ.28-ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜೆ. ಜಯಲಲಿತಾರ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗ ಮೂರು ತಿಂಗಳಲ್ಲಿ ತನ್ನ ವರದಿ ನೀಡಲಿದೆ.  ಜಯಾ ಅವರು ಅಸ್ಪತ್ರೆಗೆ ದಾಖಲಾಗಲು ಕಾರಣವಾದ ಸಂಗತಿ, ಆನಂತರದ ಚಿಕಿತ್ಸೆ ಮತ್ತು ಸಾವು ಕುರಿತು ಆಯೋಗ ಸಮಗ್ರ ತನಿಖೆ ನಡೆಸುವುದಾಗಿ ಸರ್ಕಾರ ತಿಳಿಸಿದೆ. ಜಯಲಲಿತಾ ಸೆ.9ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡಿ.5ರಂದು ಅವರು ನಿಧನರಾದರು. ಈ ಎಲ್ಲ ಸಂಗತಿಗಳಿಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ಆಯೋಗವು ಸಮಗ್ರ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡಲಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin