ಗೋವಾ ಕನ್ನಡಿಗರ ರಕ್ಷಣೆಗೆ ಕನ್ನಡ ಒಕ್ಕೂಟ ಆಗ್ರಹ, ರಾಜಭವನಕ್ಕೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Vatal--01

ಬೆಂಗಳೂರು, ಅ.3- ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರ ನೆರವಿಗೆ ಸರ್ಕಾರ ಧಾವಿಸಬೇಕು. ಸಂತ್ರಸ್ಥರಿಗೆ 2 ಕೋಟಿ ರೂ.ಗಳ ಪರಿಹಾರ ಸಾಮಗ್ರಿಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಯಿತು. ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವು, ಗಿರೀಶ್‍ಗೌಡ ಸೇರಿದಂತೆ ನೂರಾರು ಕನ್ನಡಪರ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್ ಅವರು, ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ಒಡೆದು ಹಾಕಲಾಗಿದೆ. ದೇವಸ್ಥಾನಗಳನ್ನು ಕೂಡ ಧ್ವಂಸ ಮಾಡಲಾಗಿದೆ. ಗೋವಾ ಸಂತ್ರಸ್ತರಿಗೆ ಅಗತ್ಯ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.  ಗೋವಾ ಸರ್ಕಾರದ ಕೆಟ್ಟ ನೀತಿಯನ್ನು ಈ ಸಂದರ್ಭದಲ್ಲಿ ಖಂಡಿಸಿದ ಅವರು, ಕನ್ನಡಿಗರ ಮೇಲೆ ದೌರ್ಜನ್ಯವೆಸಗಿ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಮಾಡುತ್ತಿರುವ ಗೋವಾ ಸರ್ಕಾರವನ್ನು ವಜಾ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬುರಾವ್ ಚುಂಚನಸೂರ್ ನೇತೃತ್ವದ ಸಮಿತಿ ಗೋವಾದಲ್ಲಿ ಕನ್ನಡಿಗರ ಪರಿಸ್ಥಿತಿ ಬಗ್ಗೆ ವರದಿ ನೀಡಿದೆ. ಕೂಡಲೇ ಮುಖ್ಯಮಂತ್ರಿಗಳು ಸಂತ್ರಸ್ತರ ನೆರವಿಗೆ ಧಾವಿಸಬೇಕು. ಅಲ್ಲಿನ ಕನ್ನಡಿಗರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.

Facebook Comments

Sri Raghav

Admin