ಕೇಳದವರಿಗೆಲ್ಲ ಟಿಕೆಟ್ ಕೊಡೋಕಾಗುತ್ತಾ..? : ಸಿಎಂ ಸಿದ್ದರಾಮಯ್ಯ ಗರಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01

ಮೈಸೂರು,ಅ.4- ಚುನಾವಣೆಯಲ್ಲಿ ಸ್ಪರ್ಧಿಸಲು ಕೇಳದವರಿಗೆಲ್ಲ ಟಿಕೆಟ್ ಕೊಡಲು ಸಾಧ್ಯವಾಗುತ್ತದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗರಮ್ಮಾಗಿ ಪತ್ರಕರ್ತರನ್ನೆ ಪ್ರಶ್ನಿಸಿದರು. ನಗರದ ಟಿ.ಕೆ.ಬಡಾವಣೆಯಲ್ಲಿರುವ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.

ಚುನಾವಣೆಗೆ ಟಿಕೆಟ್ ಕೇಳುತ್ತಾರೆಂದು ಎಲ್ಲರಿಗೂ ಟಿಕೆಟ್ ನೀಡಲು ಆಗುತ್ತಾ, ಕುರುಬರಿಗೆ ಕೊಟ್ಟರೆ ಅವರು ಮಾತ್ರ ಮತ ಹಾಕುತ್ತಾರಾ? ಎಲ್ಲ ವರ್ಗದವರು ಮತ ಹಾಕುತ್ತಾರೆ. ಹಾಗಾಗಿ ಎಲ್ಲರನ್ನೂ ಪರಿಗಣಿಸಿ ಟಿಕೆಟ್ ನೀಡಲಾಗುತ್ತದೆ ಎಂದರು.  ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಊಹಾಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.  ವರುಣಾ ಕ್ಷೇತ್ರದಿಂದ ನಿಮ್ಮ ಪುತ್ರ ಯತೀಂದ್ರ ಸ್ಪರ್ಧಿಸಲಿದ್ದಾರೆಯೇ ಎಂಬ ಪ್ರಶ್ನೆಗೆ, ಈ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.

Facebook Comments

Sri Raghav

Admin