ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಸಿಐಎಸ್‍ಎಫ್ ಯೋಧನಿಂದ ಫೈರಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Delhi-Metro--02

ನವದೆಹಲಿ, ಅ.4-ದೆಹಲಿ ಮೆಟ್ರೋ ರೈಲು ನಿಲ್ದಾಣದಲ್ಲಿ ಇಂದು ಬೆಳಗ್ಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಯೋಧನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದರಿಂದ ಕೆಲಕಾಲ ಆತಂಕ ಮತ್ತು ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.  ದೆಹಲಿ-ಆಜಾದ್‍ಪುರ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರ ದಟ್ಟಣೆ ವೇಳೆ ಇಬ್ಬರು ವ್ಯಕ್ತಿಗಳ ನಡುವೆ ಜಗಳ ಆರಂಭವಾಯಿತು. ಇದು ವಿಕೋಪಕ್ಕೆ ಹೋಗಿ ಪರಸ್ಪರ ಹೊಡೆದಾಡಿದರು.

ಈ ಸಂದರ್ಭದಲ್ಲಿ ಜಗಳ ಬಿಡಿಸಲು ಮುಂದಾದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆಗೆ ಉದ್ರಿಕ್ತ ಪ್ರಯಾಣಿಕರು ಮುಂದಾದಾಗ ಸಿಐಎಸ್‍ಎಫ್ ಯೋಧನೊಬ್ಬ ಜಗಳನಿರತ ಪ್ರಯಾಣಿಕರನ್ನು ಬೆದರಿಸಲು ತನ್ನ ಸರ್ವಿಸ್ ರಿವಾಲ್ವಾರ್‍ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ. ಗುಂಡಿನ ಶಬ್ಧದಿಂದ ಮೆಟ್ರೋ ನಿಲ್ದಾಣದಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ನಂತರ ಬಿಗುವಿನ ಪರಿಸ್ಥಿತಿ ತಿಳಿಗೊಂಡಿತು.

Facebook Comments

Sri Raghav

Admin