ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಇಳಿಕೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Petrol-Diesel

ನವದೆಹಲಿ, ಅ.4-ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಕಂಡುಬರುತ್ತಿದೆ. ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆಗ್ರಹಿಸಿದ್ದು, ತತ್ಪರಿಣಾಮವಾಗಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಯುವ ಸಾಧ್ಯತೆಗಳಿವೆ. ಅಬಕಾರಿ ಸುಂಕವನ್ನು ಕಡಿಮೆ ಮಾಡಿರುವ ರಾಜ್ಯ ಸರ್ಕಾರಗಳ ಕ್ರಮವನ್ನು ಸ್ವಾಗತಿಸಿರುವ ಕೇಂದ್ರ ಸರ್ಕಾರ, ಈಗ ವ್ಯಾಟ್‍ನಲ್ಲೂ ಇಳಿಕೆ ಮಾಡುವಂತೆ ಒತ್ತಾಯಿಸಿ ಪತ್ರ ಬರೆದಿದೆ.

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೆಲ ಸುಂಕಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ 2 ರೂ.ಗಳಷ್ಟು ಅಗ್ಗವಾಗಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರದ ಒತ್ತಾಯಕ್ಕೆ ರಾಜ್ಯಗಳು ಮಣಿದಲ್ಲಿ ಇಂಧನ ಬೆಲೆ ಮತ್ತಷ್ಟು ಇಳಿಮುಖವಾಗಲಿದೆ.

Facebook Comments

Sri Raghav

Admin