ಸಿದ್ದರಾಮಯ್ಯ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ  : ಜಗದೀಶ್ ಶೆಟ್ಟರ್

ಈ ಸುದ್ದಿಯನ್ನು ಶೇರ್ ಮಾಡಿ

jagadish--shettar

ಹುಬ್ಬಳ್ಳಿ, ಅ.5- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಶೈವ ಲಿಂಗಾಯತ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಜಗದೀಶ್‍ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.  ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಿನ ಸಿಎಂ ಆಗಲಿದ್ದಾರೆ ಎಂಬ ಹತಾಶೆಯಿಂದ ಧರ್ಮ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಚಿವರಾದ ವಿನಯ್‍ಕುಲಕರ್ಣಿ ಹಾಗೂ ಎಂ.ಬಿ.ಪಾಟೀಲ್ ಅವರಿಗೆ ಮಾಡಲು ಬೇರೆ ಕೆಲಸವಿಲ್ಲದೆ, ಈ ನೆಪ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನ ಮೇರೆಗೆ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಧರ್ಮದ ಹೋರಾಟದಲ್ಲಿ ಭಾಗಿಯಾಗಲಿ ಎಂದು ಹೇಳಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಆರ್‍ಎಸ್‍ಎಸ್ ಮುಖಂಡ ಸು.ರಾಮಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಈಗಾಗಲೇ ರಾಮಣ್ಣ ಅವರು ಕ್ಷಮೆ ಕೇಳಿದ್ದಾರೆ. ಅದು ಮುಗಿದ ಅಧ್ಯಾಯ ಎಂದು ಹೇಳಿದ ಅವರು, ಅದರಲ್ಲೂ ಕಾಂಗ್ರೆಸ್‍ನವರು ರಾಜಕೀಯ ಮಾಡುತ್ತಿದ್ದಾರೆ
ಎಂದರು.

Facebook Comments

Sri Raghav

Admin