ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accidenty--01

ರಾಮನಗರ,ಅ.6-ತಾಲ್ಲೂಕಿನ ಕೆಂಪನಹಳ್ಳಿ ಬಳಿ ಇಂದು ಬೆಳಗಿನಜಾವ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೃತಪಟ್ಟ ನಾಲ್ವರಲ್ಲಿ ಒಬ್ಬರು ಬೆಂಗಳೂರು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಕೇರಳ ಮೂಲದ ಜಾಕಬ್ ಮತ್ತು ವೆಲ್ಲೂರು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರಾದ ಜೀನಾ ಎರಾಲ್ಡ್ ಮತ್ತ ರುಬೇಕಾ ಎಂದು ಪೊಲೀಸರು ಹೇಳಿದ್ದಾರೆ. ಇವರಿಬ್ಬರ ಪೋಷಕರು ದುಬೈನಲ್ಲಿದ್ದಾರೆ. ಮೃತಪಟ್ಟ ಇನ್ನೊಬ್ಬ ದುರ್ದೈವಿ ನಿಖಿತ್ ಎಂದು ತಿಳಿದುಬಂದಿದ್ದು , ಇವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು , ಮೈಸೂರು ಕಡೆಯಿಂದ ಅತಿವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದು ನಂತರ ಎದುರಿಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ.  ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು , ಅದರಲ್ಲಿ ಸಿಕ್ಕಿ ಹಾಕಿಕೊಂಡಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಹರಸಾಹಸಪಟ್ಟು ಹೊರತೆಗೆಯಲಾಗಿದೆ.   ರಾಮನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು , ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin