ಮಳೆಗೆ ಮುಳುಗಿದ ಬೆಂಗಳೂರು : ಸಚಿವರಿಗೆ ವೇಣುಗೋಪಾಲ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Venugopal--01

ಬೆಂಗಳೂರು, ಅ.6-ನಿನ್ನೆ ಸುರಿದ ಭಾರೀ ಮಳೆಯಿಂದ ಬೆಂಗಳೂರು ಮಿನಿ ಸಮುದ್ರವಾಗಿ ಪರಿವರ್ತನೆ ಆಗಿರುವುದಕ್ಕೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಅವರು ಜಿಲ್ಲಾ ಉಸ್ತುವಾರಿ ಹಾಗೂ ಬೆಂಗಳೂರು ನಗರ ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಕುಮಾರಕೃಪಾ ಅತಿಥಿ ಗೃಹಕ್ಕೆ ಬೆಂಗಳೂರು ನಗರ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್, ಗೃಹ ಸಚಿವ ರಾಮಲಿಂಗಾರೆಡ್ಡಿ, ನಗರಾಭಿವೃದ್ಧಿ ಸಚಿವ ರೋಷನ್‍ಬೇಗ್ ಅವರನ್ನು ಕರೆಸಿಕೊಂಡ ವೇಣುಗೋಪಾಲ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಪ್ರಶ್ನಿಸಿದರು.

ಸಾಮಾಜಿಕ ಜಾಲ ತಾಣದಲ್ಲಿ ಬೆಂಗಳೂರಿನ ಮಳೆ ನೀರನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಅವಹೇಳನ ವ್ಯಾಪಕವಾಗಿ ಕೇಳಿ ಬರುತ್ತಿದೆ. ಇದು ಪಕ್ಷಕ್ಕೆ ಹಾನಿಯಾಗಲಿದ್ದು, ಸಾರ್ವಜನಿಕರು ಸಮಸ್ಯೆಯಲ್ಲಿರುವುದನ್ನು ಸರ್ಕಾರ ಸಹಿಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಖಾರವಾಗಿ ಆಕ್ಷೇಪಿಸಿದರು.
ಮಳೆ ನೀರಿನ ಸಮಸ್ಯೆ ಇಂದೂ, ನಿನ್ನೆಯದಲ್ಲ. ಈ ಹಿಂದೆ ಅಧಿಕಾರ ನಡೆಸಿದ ಬೆಂಗಳೂರಿನ ಬೆಳವಣಿಗೆಯ ವೇಗಕ್ಕೆ ಅನುಗುಣವಾಗಿ ಬಿಜೆಪಿ ಸರಿಯಾದ ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಿಲ್ಲ. ಅಂದರೆ ಹೀಗಾಗಿ ಸಮಸ್ಯೆ ತೀವ್ರ ಸ್ವರೂಪಕ್ಕೆ ಬಂದಿದೆ. ಜತೆಗೆ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ನಮ್ಮ ಕೈಕಟ್ಟಿಹಾಕಿದಂತಿದೆ. ಸರ್ಕಾರ ಬೆಂಗಳೂರಿನ ಅಭಿವೃದ್ಧಿಗಾಗಿಯೇ 7ಸಾವಿರ ಕೋಟಿ ರೂ. ನೀಡಿದೆ. ಹಿಂದೆಂದೂ ದೊಡ್ಡ ಮಟ್ಟದ ಅನುದಾನವನ್ನು ಅಭಿವೃದ್ಧಿ ಕಾಮಗಾರಿಗೆ ಬಳಸಿರಲಿಲ್ಲ ಎಂದರು.

ಹಲವಾರು ಯೋಜನೆಗಳು ಪ್ರಗತಿಯಲ್ಲಿವೆ. ಅವು ಮುಗಿಯುವವರೆಗೂ ಈ ರೀತಿ ಸಮಸ್ಯೆಗಳು ಎದುರಾಗುತ್ತಿರುತ್ತವೆ. ಕಾಮಗಾರಿಯನ್ನು ಶೀಘ್ರ ಮುಗಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದರು.  ಆದರೆ, ಇಷ್ಟಕ್ಕೆ ಸುಮ್ಮನಾಗದ ವೇಣುಗೋಪಾಲ್ ಅವರು,ಯಾವುದೇ ಉತ್ತರ ಮತ್ತು ಸಮಜಾಯಿಸಿಗಳು ಜನರ ಸಮಸ್ಯೆಗೆ ಪರಿಹರ ಅಲ್ಲ. ಮೊದಲು ಮಳೆ ನೀರು ನಿಲ್ಲದಂತೆ ಎಚ್ಚರವರಹಿಸಿ. ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ ಎಂದು ಸೂಚಿಸಿದರು.

ಜಾರ್ಜ್ ಅವರ ಜತೆ ಸೇರಿ ಬೆಂಗಳೂರಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಇದೇ ಸಂದರ್ಭದಲ್ಲಿ ವೇಣುಗೋಪಾಲ್ ಅವರಿಗೆ ಭವರಸೆ ನೀಡಿದರು.

Facebook Comments

Sri Raghav

Admin