ಮಹದಾಯಿ-ಕಳಸಾ ಬಂಡೂರಿ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯಲು ಗೃಹ ಸಚಿವರಿಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--01

ಹುಬ್ಬಳ್ಳಿ, ಅ.7- ಮಹದಾಯಿ-ಕಳಸಾ ಬಂಡೂರಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಶಾಸಕ ಎಚ್.ಕೋನರೆಡ್ಡಿಯವರು ಗೃಹಸಚಿವ ರಾಮಲಿಂಗಾರೆಡ್ಡಿಯವರಿಗೆ ಇಂದು ಮನವಿ ಸಲ್ಲಿಸಿದರು. ಹುಬ್ಬಳ್ಳಿಯ ಕಮಿಷನರೇಟ್ ಕಚೇರಿ ಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕೋನರೆಡ್ಡಿಯವರು ಮಹದಾಯಿ-ಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಆಗ್ರಹಿಸಿ ಹೋರಾಟ ಮಾಡಿದ ಅಮಾಯಕ ರೈತರ ಮೇಲೆ ಪ್ರಕರಣಗಳನ್ನು ದಾಖಲಿಸಿ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ನೂರಾರು ಹೋರಾಟಗಾರರು ಇದರಿಂದ ತೊಂದರೆಗೀಡಾಗಿದ್ದಾರೆ. ಕೂಡಲೇ ಸರ್ಕಾರ ರೈತರ ಮೇಲಿನ ಎಲ್ಲ ಪ್ರಕರಣಗಳನ್ನೂ ವಾಪಸ್ ಪಡೆಯಬೇಕೆಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಧಾರವಾಡ, ಗದಗ, ಬೆಳಗಾವಿ ಜಿಲ್ಲೆಯ ರೈತರ ಮೇಲೆ 15 ಪ್ರಕರಣಗಳಿದ್ದು, ಈ ಎಲ್ಲ ಪ್ರಕರಣಗಳನ್ನು ಗೃಹ ಸಚಿವರು ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದರು. ಮಹದಾಯಿ-ಕಳಸಾ ಬಂಡೂರಿಗಾಗಿ ಆಗ್ರಹಿಸಿ ಎರಡು ವರ್ಷಗಳ ಕಾಲ ಹೋರಾಟ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ದಿಂದ ಯಾವುದೇ ನ್ಯಾಯ ಸಿಕ್ಕಿಲ್ಲ. ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ಕೋನರೆಡ್ಡಿ ಹೇಳಿದರು. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮೂರೂ ರಾಜ್ಯಗಳು ಮಹದಾಯಿ ಸಮಸ್ಯೆ ಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳ ಬೇಕು. ಪ್ರಧಾನಿ ನರೇಂದ್ರಮೋದಿಯವರು ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು. ಬಿಜೆಪಿ ಸಂಸದರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.

ಅವರು ಪ್ರಧಾನಿಯವರ ಮೇಲೆ ಒತ್ತಡ ತಂದು ಸಮಸ್ಯೆ ಪರಿಹರಿಸಿ ಉತ್ತರ ಕರ್ನಾಟಕ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮುಂದಾಗಬೇಕೆಂದು ಈ ಸಂದರ್ಭದಲ್ಲಿ ಕೋನರೆಡ್ಡಿ ಹೇಳಿದರು.

Facebook Comments

Sri Raghav

Admin