ಶೀಘ್ರದಲ್ಲೇ ಗೌರಿಲಂಕೇಶ್ ಹಂತಕರನ್ನು ಬಂಧಿಸಲಾಗುವುದು : ಗೃಹ ಸಚಿವ ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy--02

ಹುಬ್ಬಳ್ಳಿ, ಅ.7-ಹಿರಿಯ ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಹಂತಕರನ್ನು ಆದಷ್ಟು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆಕೋರರನ್ನು ಆದಷ್ಟು ಬೇಗ ಬಂಧಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈ ಪ್ರಕರಣವನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಎಸ್‍ಐಟಿ ರಚನೆ ಮಾಡಿದ್ದು, ಪತ್ರಿಕೆಗಳಲ್ಲಿ ಬರುವ ಕೆಲವೊಂದು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಎಸ್‍ಐಟಿ ಈ ಪ್ರಕರಣದಲ್ಲಿ ನೂರಕ್ಕೆ ನೂರು ಸಕ್ಸಸ್ ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯ ಕಾರ್ಯವೈಖರಿ ಸಂಬಂಧ ಏಳು ಜಿಲ್ಲೆಗಳಲ್ಲಿ ಸಭೆ ನಡೆಸಿದ್ದೇನೆ. ಈಗ ಹುಬ್ಬಳ್ಳಿ-ಧಾರವಾಡದಲ್ಲೂ ಕೂಡ ಸಭೆ ನಡೆಸಿದ್ದು, ಇಲ್ಲಿನ ಕ್ರಿಕೆಟ್ ಬೆಟ್ಟಿಂಗ್, ವೇಶ್ಯಾವಾಟಿಕೆ ಸೇರಿದಂತೆ ಕೆಲವು ಅಕ್ರಮಗಳನ್ನು ಶೂನ್ಯಕ್ಕೆ ತರುತ್ತೇವೆ ಎಂದು ಹೇಳಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.
ಮೀಟರ್ ಬಡ್ಡಿದಂಧೆ, ರೌಡಿಶೀಟರ್‍ಗಳನ್ನು ಮಟ್ಟ ಹಾಕಲು ಸೂಚನೆ ನೀಡಲಾಗಿದ್ದು, ಸಾರ್ವಜನಿಕರಿಂದ ದೂರು ಬಂದ ತಕ್ಷಣ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ವಿಶೇಷ ಕ್ರಮ ಕೈಗೊಳ್ಳಲಾಗಿದೆ ಎಂದರು. ಇನ್ನು ಪದೇ ಪದೇ ಗೂಂಡಾ ವೃತ್ತಿಗಳಲ್ಲಿ ತೊಡಗುವವರನ್ನು ಜಿಲ್ಲೆಯಿಂದ ಹೊರಹಾಕಬೇಕು, ಸಮಾಜದಲ್ಲಿ ಶಾಂತಿ ನಿರ್ಮಾಣವಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದ ಗೃಹ ಸಚಿವರು, ಬಡ್ಡಿ ವ್ಯವಹಾರ ಕಾನೂನು ಬಾಹಿರವಾಗಿ ನಡೆದುಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು, ಗಸ್ತು ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸಲು ಹಿರಿಯ ಅಧಿಕಾರಿಗಳು ಹೆಚ್ಚು ಎಚ್ಚರ ವಹಿಸಬೇಕು ಎಂದು ಹೇಳಿದರು.  ಹುಬ್ಬಳ್ಳಿ-ಧಾರವಾಡ ಪೆÇಲೀಸ್ ಆಯುಕ್ತ ಎಂ.ಎನ್.ನಾಗರಾಜ್, ಡಿಜಿಪಿ ನ್ಯಾಮೇಗೌಡ, ಎಸ್‍ಪಿ ಸಂಗೀತಾ ಮತ್ತಿತರರು ಈ ಸಂದರ್ಭದಲ್ಲಿದ್ದರು.

Facebook Comments

Sri Raghav

Admin