ಸಿದ್ದರಾಮಯ್ಯ-ಪರಮೇಶ್ವರ್’ಗೆ ವೇಣುಗೋಪಾಲ್ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Venugooooo

ಬೆಂಗಳೂರು, ಅ.7- ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಬಗ್ಗೆ ಎಐಸಿಸಿ ಪ್ರಧಾನಕಾರ್ಯದರ್ಶಿ ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಸದ್ಯಕ್ಕೆ ಮುಂದಿನ ಜವಾಬ್ದಾರಿ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಿ. ಮುಂದಿನ ಮುಖ್ಯಮಂತ್ರಿ ಆಯ್ಕೆ, ಟಿಕೆಟ್ ಹಂಚಿಕೆಯಂತಹ ವಿಷಯಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅನಗತ್ಯ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚೆಗೆ ಕಾರಣವಾಗುವ ಮೂಲಕ ವಾತಾವರಣವನ್ನು ಹಾಳು ಮಾಡಬೇಡಿ ಎಂದರು.

ಕಳೆದ ನಾಲ್ಕೂವರೆ ವರ್ಷಗಳಿಂದ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ. ಅನಗತ್ಯ ಹೇಳಿಕೆಗಳು ಹಾಗೂ ವಿವಾದಗಳಿಂದ ಅಷ್ಟು ದಿನದ ಶ್ರಮವನ್ನು ಹಾಳು ಮಾಡಬೇಡಿ. ಮೊದಲು ಮನೆ ಮನೆಗೆ ಕಾಂಗ್ರೆಸ್ ಯೋಜನೆಯನ್ನು ಯಶಸ್ವಿಗೊಳಿಸಿ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ. ಜನ ಕಾಂಗ್ರೆಸ್‍ಗೆ ಮತಹಾಕುವುದನ್ನು ಗಟ್ಟಿಗೊಳಿಸಿ ಎಂದು ಸೂಚಿಸಿದರು.

ಜತೆಗೆ ಪ್ರತಿಪಕ್ಷಗಳ ಹೆಜ್ಜೆಗಳನ್ನು ಆಧರಿಸಿ ನೀವೂ ಚುನಾವಣೆಯಲ್ಲಿ ಗೆಲುವಿಗೆ ಅಗತ್ಯ ತಂತ್ರಗಳನ್ನು ರೂಪಿಸಿ. ಅದನ್ನು ಬಿಟ್ಟು ಮುಖ್ಯಮಂತ್ರಿ ಅಭ್ಯರ್ಥಿ, ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆ ಮಾಡಬೇಡಿ. ಇದು ಒಳ್ಳೆಯದಲ್ಲ ಎಂದು ತಾಕೀತು ಮಾಡಿದರು.

Facebook Comments

Sri Raghav

Admin