ಸಿ.ಎಚ್.ವಿಜಯಶಂಕರ್ ಬಿಜೆಪಿ ತೊರೆಯುವುದಿಲ್ಲ: ರಾಮದಾಸ್

ಈ ಸುದ್ದಿಯನ್ನು ಶೇರ್ ಮಾಡಿ

ramdas

ಮೈಸೂರು, ಅ.7-ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದು ಮಾಜಿ ಸಚಿವ ರಾಮದಾಸ್ ತಿಳಿಸಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯಶಂಕರ್ ಅವರು ಪಕ್ಷ ತೊರೆಯುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರಕ್ರಿಯಿಸಿ ಕೆಲವು ಸಮಸ್ಯೆಗಳಿದ್ದವು. ಹಾಗಾಗಿ ತೊರೆಯುತ್ತೇನೆ ಎಂದು ಹೇಳಿದ್ದರು. ಪಕ್ಷದ ಮುಖಂಡರು ಮಾತುಕಥೆ ನಡೆಸಿದ್ದಾರೆ.

ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದರು.  2018ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ವಿಜಯಶಂಕರ್ ಅವರು ಪಿರಿಯಾಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ರಾಮದಾಸ್ ತಿಳಿಸಿದರು.

Facebook Comments

Sri Raghav

Admin