ಕೇರಳದಲ್ಲಿ 120 ಬಿಜೆಪಿ-ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ : ಅಮಿತ್ ಷಾ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah--02

ನವದೆಹಲಿ, ಅ.8-ಕೇರಳದಲ್ಲಿ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸ್‍ವಾದಿ) ಅಧಿಕಾರಕ್ಕೆ ಬಂದ ನಂತರ 120ಕ್ಕೂ ಹೆಚ್ಚು ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಕಗ್ಗೊಲೆಯಾಗಿದೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇರಳ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿ ಎಡ ಪಂಥೀಯ (ಸಿಪಿಐ-ಎಂ) ಕಾರ್ಯಕರ್ತರಿಂದ ನಡೆದಿವೆ ಎನ್ನಲಾದ ಬಿಜೆಪಿ-ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ಪ್ರಕರಣಗಳನ್ನು ಖಂಡಿಸಿ ದೆಹಲಿಯಲ್ಲಿ ಇಂದು ನಡೆದ ಪ್ರತಿಭಟನಾ ರ್ಯಾಲಿಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕ್ಷೇತ್ರದಲ್ಲೇ ರಾಜಕೀಯ ಕಗ್ಗೊಲೆಗಳು ನಡೆಯುತ್ತಿವೆ. ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರನ್ನು ಕೊಂದು ತುಂಡುತುಂಡಾಗಿ ಕತ್ತರಿಸಲಾಗುತ್ತಿದೆ. ಈ ಕೃತ್ಯಗಳನ್ನು ನಡೆಸುತ್ತಿರುವ ಸಿಪಿಐ-ಎಂ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಅವರು ತರಾಟೆಗೆ ತೆಗೆದುಕೊಂಡರು.  ಕೇರಳದಲ್ಲಿ ನಡೆದ ಜನ ರಕ್ಷಕ್ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ದೆಹಲಿಗೆ ಹಿಂದಿರುಗಿರುವ ಅಮಿತ್ ಶಾ, ಸಿಪಿಐ-ಎಂ ಕೃತ್ಯಗಳಿಗೆ ನಾವು ಹೆದರುವುದಿಲ್ಲ. ಇದರ ವಿರುದ್ಧ ರಾಷ್ಟ್ರಮಟ್ಟದಲ್ಲಿ ಹೋರಾಟ ಮುಂದುವರಿಸುವುದಾಗಿ ಹೇಳಿದರು.

Facebook Comments

Sri Raghav

Admin