ಪೊಲೀಸರ ಮೇಲೆ ಹಲ್ಲೆ ನಡೆಸಿದ ದರೋಡೆಕೋರರ ಕಾಲಿಗೆ ಗುಂಡೇಟು

ಈ ಸುದ್ದಿಯನ್ನು ಶೇರ್ ಮಾಡಿ

ZGulbarga-Firing--02

ಕಲಬುರಗಿ, ಅ.8-ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ಇಬ್ಬರು ದರೋಡೆಕೋರರನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ದರೋಡೆಕೋರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಗಾಯಗೊಳಿಸಿರುವ ಘಟನೆ ನಗರ ಹೊರವಲಯದ ಡಬರಾಬಾದ್‍ನಲ್ಲಿ ನಡೆದಿದೆ.
ಈ ವೇಳೆ ಆತ್ಮ ರಕ್ಷಣೆಗಾಗಿ ಅಶೋಕನಗರ ಠಾಣೆಯ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಅವರು ದರೋಡೆಕೋರರ ಮೇಲೆ ಗುಂಡು ಹಾರಿಸಿದ್ದಾರೆ. ಕಾಲಿಗೆ ಗುಂಡು ಬಿದ್ದು ಗಾಯಗೊಂಡ ದರೋಡೆಕೋರರಾದ ರೌಡಿ ಚೇತನ್ ಮತ್ತು ಶಿವಕುಮಾರ್ ಅವರನ್ನು ಬಂಧಿಸಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ದರೋಡೆಕೋರರು ಮತ್ತು ಪೊಲೀಸರ ನಡುವೆ ನಡೆದ ದಾಳಿ ಪ್ರತಿ ದಾಳಿಯಲ್ಲಿ ಆರ್‍ಜೆ ನಗರ ಠಾಣೆಯ ಪಿಎಸ್‍ಐ ಅಕ್ಕಮಹಾದೇವಿ ಹಾಗೂ ಮತ್ತೊಬ್ಬ ಪೇದೆ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರಾಗಿರುವ ಇಬ್ಬರು ರೌಡಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು.

Facebook Comments

Sri Raghav

Admin