10 ದಿನಗಳಲ್ಲಿ ರಸ್ತೆಗುಂಡಿ ಮುಚ್ಚಲು ಸಿಎಂ ಖಡಕ್ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiaha-CM--01

ಬೆಂಗಳೂರು,ಅ.9- ನಗರದ ರಸ್ತೆಗುಂಡಿಗಳನ್ನು ಹತ್ತು ದಿನಗಳಲ್ಲಿ ಮುಚ್ಚಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆದೇಶ ನೀಡಿದ್ದಾರೆ. ಬೆಂಗಳೂರು ಗುಂಡಿಗಳಿಂದ ಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸರ್ಕಾರದ ಕ್ರಮವೇನು ಎಂದು ಸಿಎಂ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಗರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಹತ್ತು ದಿನಗಳ ಕಾಲಾವಕಾಶ ನೀಡಲಾಗಿದೆ.

10 ದಿನದೊಳಗೆ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಿ ಸಂಭಾವ್ಯ ಅನಾಹುತಗಳನ್ನು ತಪ್ಪಿಸಲಾಗುವುದು ಎಂದು ಹೇಳಿದರು.   ನಗರದೆಲ್ಲೆಡೆ ಬಿದ್ದ ಭಾರೀ ಮಳೆಯಿಂದಾಗಿ ರಸ್ತೆಗಳು ಹಾಳಾಗಿ ಹಲವೆಡೆ ಗುಂಡಿಗಳು ಬಿದ್ದಿವೆ. ತ್ವರಿತಗತಿಯಲ್ಲಿ ಕಾಮಗಾರಿ ನಡೆಸಿ ಈ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ ಬಿಬಿಎಂಪಿ ಆಯುಕ್ತರು ಮತ್ತು ಮೇಯರ್ ಜೊತೆ ಮಾತುಕತೆ ನಡೆಸಿದ್ದು , ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದು ತಿಳಿಸಿದರು.  ನಂತರ ರಸ್ತೆಗುಂಡಿಯಿಂದ ವಾಹನ ಸವಾರರು ಮೃತಪಟ್ಟ ಸ್ಥಳ ನಾಯಂಡಹಳ್ಳಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Facebook Comments

Sri Raghav

Admin