ಕೊಂಡದಲ್ಲಿ ಬಿದ್ದು ವ್ಯಕ್ತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Konda--012

ಕೊಪ್ಪಳ, ಅ.10- ಮೊಹರಂ ಪ್ರಯುಕ್ತ ಸಿದ್ಧಪಡಿಸಿದ್ದ ಕೊಂಡದಲ್ಲಿ ಬಿದ್ದು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಹಿರೆಬೆಣಕಲ್ ಗ್ರಾಮದಲ್ಲಿ ನಡೆದಿದೆ. ಮೊಹರಂ ಪ್ರಯುಕ್ತ ಕಾಡೆಪೀರ ದೇವರಿಗೆ ನಿನ್ನೆ ರಾತ್ರಿ ಗ್ರಾಮದಲ್ಲಿ ಮುಸ್ಲಿಮರು ಕೊಂಡ ಹಾಕಿದ್ದರು. ಕೊಂಡ ಹಾಯಿಸಲು ಹೋದ ಖಾದರ್ ಭಾಷಾ ಎಂಬಾತ ಉರಿಯುತ್ತಿದ್ದ ಕೊಂಡದಲ್ಲಿ ಆಕಸ್ಮಿಕವಾಗಿ ಬಿದ್ದಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ಭಾಷಾನನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೊಂಡದಲ್ಲಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಸಾಕಷ್ಟಿದ್ದರೂ ನಿನ್ನೆ ಕಾಡೇಪೀರ ದೇವರಿಗೆ ಏರ್ಪಡಿಸಿದ್ದ ಕೊಂಡದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದು ದುರ್ದೈವದ ವಿಷಯ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin