ನಾಳೆಯಿಂದ 21ರವರೆಗೆ ಭಕ್ತರಿಗೆ ಹಾಸನಾಂಬೆ ದರ್ಶನ ಭಾಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

hasanamba

ಹಾಸನ, ಅ.11- ನಗರದ ಅಧಿದೇವಿ ಹಾಸನಾಂಬೆ ದರ್ಶನ ಮಹೋತ್ಸವ ನಾಳೆಯಿಂದ ಪ್ರಾರಂಭವಾಗಲಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಇದರ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ತಿಳಿಸಿದ್ದಾರೆ.
ಹಾಸನಾಂಬೆ ದೇವಾಲಯದ ಬಳಿ ಸಿದ್ಧತೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ನಾಳೆಯಿಂದ 21ರವರೆಗೆ ಹಾಸನಾಂಬದೇವಿ ಬಾಗಿಲು ತೆರೆದಿರುತ್ತದೆ. ಆದರೆ ಬಾಗಿಲು ತೆರೆಯುವ ನಾಳೆ ಹಾಗೂ ಬಾಗಿಲು ಮುಚ್ಚುವ ದಿನವಾದ ಅ.21ರಂದು ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಹೇಳಿದರು.

ಈ ಬಾರಿ ಹೆಚ್ಚಿನ ಪಾಸ್‍ಗಳ ವಿತರಣೆ ಇರುವುದಿಲ್ಲ. ಪೂಜಾ ಅವಧಿಯನ್ನು ಕಡಿಮೆಗೊಳಿಸಲಾಗಿದ್ದು ಅತಿ ಗಣ್ಯರ ಹಾಸನಾಂಬ ದರ್ಶನದ ವೇಳೆ ಹೆಚ್ಚವಿನ ಕಾಲ ವೈಯವಾಗದಂತೆ ವ್ಯವಸ್ಥೆ ಮಾಡಲಾಗಹಿದೆ. ಅತಿ ಗಣ್ಯರೂ ಜನಪ್ರತಿನಿಧಿಗಳು, ಭಕ್ತಾಧಿಗಳು ಸಹಕರಿಸಬೇಕು ಎಂದು ಉಪವಿಭಾಗಾಧಿಕಾರಿಯವರು ಮನವಿ ಮಾಡಿದರು.

ಈ ಬಾರಿ ಭಕ್ತಾದಿಗಳಿಗೆ ಪ್ರಸಾದವನ್ನು ಹಾಸನಾಂಬ ದೇವಾಲಯದಿಂದ 200 ಮೀಟರ್ ದೂರದಲ್ಲಿರುವ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ವಿತರಿಸಲಾಗುವುದು. ತುರ್ತು ದರ್ಶನ ಬಯಸುವವರು ವಿಶೇಷ ದರ್ಶನದ ಪಾಸ್ ಪಡೆಯಬಹುದು ಎಂದು ಹೇಳಿದರು. ತಹಸೀಲ್ದಾರ್ ಶಿವಶಂಕರ್, ಮುಜರಾಯಿ ತಹಸೀಲ್ದಾರ್ ವಿದ್ಯುಲತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಶ್ರೀಕಂಠಮೂರ್ತಿ ಮತ್ತಿತರರು ಹಾಜರಿದ್ದರು.

Facebook Comments

Sri Raghav

Admin