ಈಜಲು ಹೋಗಿದ್ದ ವಿದ್ಯಾರ್ಥಿ ಕೆಸರಲ್ಲಿ ಸಿಲುಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಅ.12-ಕೆರೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಿ.ಎಸ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ನಿವಾಸಿ ಮಂಜುನಾಥ್(17) ಮೃತಪಟ್ಟ ವಿದ್ಯಾರ್ಥಿ.

ಈತ ನಿನ್ನೆ ಕಾಲೇಜು ಮುಗಿಸಿಕೊಂಡು ತನ್ನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದಾನೆ. ಈ ವೇಳೆ ಕೆಸರಿನಲ್ಲಿ ಸಿಲುಕಿ ಮುಳುಗಿ ಸಾವನ್ನಪ್ಪಿದ್ದಾನೆ. ಸುದ್ದಿ ತಿಳಿದ ಪೊಲೀಸರು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಶವ ಪತ್ತೆಯಾಗಿದೆ. ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments